For the best experience, open
https://m.justkannada.in
on your mobile browser.

ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ ಕಣಕ್ಕೆ: ಬಿ ಫಾರಂ ವಿತರಣೆ

11:57 AM May 15, 2024 IST | prashanth
ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ ಕಣಕ್ಕೆ  ಬಿ ಫಾರಂ ವಿತರಣೆ

ಮೈಸೂರು, ಮೇ 15,2024 (www.justkannada.in): ರಾಜ್ಯ ವಿಧಾನಪರಿಷತ್ ಚುನಾವಣೆ  ದಕ್ಷಿಣ ಶಿಕ್ಷಕರ  ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದ್ದು  ಜೆಡಿಎಸ್ ವರಿಷ್ಠ ದೇವೇಗೌಡರು ಬಿ ಫಾರಂ ನೀಡಿದ್ದಾರೆ.

ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾದ  ವಿವೇಕಾನಂದ ಅವರಿಗೆ ಮಾಜಿ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ ದೇವೇಗೌಡರು ಬಿ ಫಾರಂ ನೀಡಿ ಗೆದ್ದು ಬರುವಂತೆ ಆಶೀರ್ವಾದಿಸಿದರು. ಸಂದರ್ಭದಲ್ಲಿ ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರು ಹಾಗೂ ಶಾಸಕರಾದ ಜಿ ಟಿ ದೇವಗೌಡರು, ನಿರಂಜನ್ ಮೂರ್ತಿ, ನಾಗಣ್ಣ ಗೌಡರು ಉಪಸ್ಥಿತರಿದ್ದರು.

ಜೆಡಿಎಸ್‌ಗೆ ಈ ಕ್ಷೇತ್ರ ಬಿಟ್ಟುಕೊಡುವುದಾಗಿ ಬಿಜೆಪಿ ಹೈಕಮಾಂಡ್ ಈಗಾಗಲೇ ಸ್ಪಷ್ಟಪಡಿಸಿದೆ ಎಂದು ಮಾಜಿ ಶಾಸಕ ಸಾ.ರಾ. ಮಹೇಶ್ ಸುಳಿವು ನೀಡಿದ್ದರು. ಮೇ 15ಕ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸುವುದಾಗಿಯೂ ಹೇಳಿದ್ದರು. ಅದರಂತೆಯೇ ಇಂದು ಅಭ್ಯರ್ಥಿಗೆ ಬಿ ಫಾರಂ ನೀಡಲಾಗಿದೆ.

Key words: Vivekananda, JDS , candidate, MLC-Election

Tags :

.