ಕಬಿನಿ ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡುಗಡೆ: ದೇಗುಲ ಅರ್ಧ ಮುಳುಗಡೆ
12:50 PM Jul 18, 2024 IST | prashanth
ಮೈಸೂರು,ಜುಲೈ,18,2024 (www.justkannada.in): ಕಳೆದ ಬಾರಿ ಕೈಕೊಟ್ಟಿದ್ದ ಮುಂಗಾರು ಮಳೆ ಈ ಬಾರಿ ಉತ್ತಮವಾಗಿ ಆಗುತ್ತಿದ್ದು, ಜಲಾಶಯಗಳು ಭರ್ತಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು ಜಲಾಶಯ ಭರ್ತಿಯಾಗಿದೆ, ಹೀಗಾಗಿ ಜಲಾಶಯದಿಂದ ಅಪಾರ ಪ್ರಮಾಣಧಲ್ಲಿ ನೀರನ್ನ ಹೊರಕ್ಕೆ ಬಿಡಲಾಗಿದೆ.
ಕಬಿನಿ ಜಲಾಶಯದಿಂದ ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ನಂಜನಗೂಡಿನ ಪ್ರದೇಶಗಳು ಜಲಾವೃತವಾಗಿವೆ. ಕಪಿಲಾ ನದಿ ದಡದಲ್ಲಿರುವ ಪರಶುರಾಮ ದೇಗುಲ ಅರ್ಧ ಮುಳುಗಡೆಯಾಗಿದ್ದು ದೇವಸ್ಥಾನಕ್ಕೆ ಹೋಗುವ ದಾರಿ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ ದೇವಸ್ಥಾನಕ್ಕೆ ಬೀಗ ಹಾಕಲಾಗಿದೆ.
Key words: water, release, Kabini reservoir, Temple