ಇನ್ಮುಂದೆ ಬಸ್ ಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ- ಸಾರಿಗೆ ಸಚಿವ ರಾಮಲಿಂಗರೆಡ್ಡಿ.
12:36 PM Dec 20, 2023 IST
|
prashanth
ಬೆಂಗಳೂರು,ಡಿಸೆಂಬರ್,20,2023(www.justkannada.in): ದೇಶದಲ್ಲಿ ಕೋವಿಡ್ ಹೆಚ್ಚಳವಾಗುತ್ತಿದ್ದು ರಾಜ್ಯದಲ್ಲಿ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ತಡೆಗೆ ಸಾರಿಗೆ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು ಇನ್ಮುಂದೆ ಬಸ್ ಗಳಲ್ಲಿ ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಿದೆ.
ಈ ಕುರಿತು ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಸರ್ಕಾರದ ಮಾರ್ಗಸೂಚಿಯಂತೆ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಪ್ರತಿಯೊಬ್ಬ ಪ್ರಯಾಣಿಕರೂ ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ ಎಂದು ಮನವಿ ಮಾಡಿದರು.
ನಾವು ಸರ್ಕಾದ ಆದೇಶ ಪಾಲನೆ ಮಾಡುತ್ತೇವೆ ಸರ್ಕಾರದ ಮಾರ್ಗಸೂಚಿಯಂತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದರು.
Key words: wearing- masks – bus- mandatory – Minister-Ramalingareddy
Next Article