ನಾನು 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ- ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ವಿಶ್ವಾಸ.
10:28 AM Apr 17, 2024 IST
|
prashanth
ಶಿವಮೊಗ್ಗ,ಏಪ್ರಿಲ್,17, 2024 (www.justkannada.in): ಬಿಜೆಪಿ ಪಕ್ಷವನ್ನ ಅಪ್ಪ ಮಕ್ಕಳಿದಿಂದ ಉಳಿಸಲು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ನಾನು 1ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕೀಯ ನಡೆದಿದೆ. ಶಿಕಾರಿಪುರದಲ್ಲಿ ತಂದೆ ಮಕ್ಕಳು ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು. ಶಿಕಾರಿಪುರದ ಇತಿಹಾಸದಲ್ಲೇ ಹೆಚ್ಚು ಹಣ ಖರ್ಚು ಮಾಡಿ ಚುನಾವಣೆ ಮಾಡಿದ್ದರು. ಈ ಮಾತನ್ನು ನಾನಲ್ಲ ಕಾಂಗ್ರೆಸ್ ಪಕ್ಷವರೇ ಹೇಳಿದ್ದಾರೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಅಪ್ಪಮಕ್ಕಳನ್ನ ಸೋಲಿಸಬೇಕು. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ನಾನು 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಈಶ್ವರಪ್ಪ ತಿಳಿಸಿದರು.
Key words: win, 1lakh, votes, KS Eshwarappa
Next Article