ಮಂಡ್ಯದಲ್ಲಿ ನಾನು ನೂರಕ್ಕೆ ನೂರರಷ್ಟು ಗೆಲ್ಲುತ್ತೇನೆ- ಹೆಚ್.ಡಿ ಕುಮಾರಸ್ವಾಮಿ.
10:57 AM Apr 04, 2024 IST
|
prashanth
ಮಂಡ್ಯ,ಏಪ್ರಿಲ್,4,2024 (www.justkannada.in): ಮಂಡ್ಯದಲ್ಲಿ ನಾನು ನೂರಕ್ಕೆ ನೂರರಷ್ಟು ಗೆಲ್ಲುತ್ತೇನೆ. ಮಂಡ್ಯದಿಂದಲೇ ಮೈತ್ರಿಯ ಮೊದಲ ಜಯ ಸಿಗಲಿದೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿಕೆ, ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ. ಮೈತ್ರಿಯಿಂದ ಕಾಂಗ್ರೆಸ್ ಗೆ ಭೀತಿ ಶುರುವಾಗಿದೆ ಎಂದರು.
ಕಾಂಗ್ರೆಸ್ ಟೀಕೆ ಮಾಡುವುದನ್ನು ಬಿಟ್ಟು ಬೇರೆ ಏನು ಮಾಡುತ್ತಿಲ್ಲ ಜೆಡಿಎಸ್ ಸೋಲಿಸುವ ಕನನಸು ನನಸಾಗುವುದಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
Key words: win, Mandya, HD Kumaraswamy.
Next Article