For the best experience, open
https://m.justkannada.in
on your mobile browser.

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ನಾಳೆ ರಾಜ್ಯಕ್ಕೆ ಕೇಂದ್ರದ ಐವರು ಸಂಸದರ ನಿಯೋಗ-ಬಿವೈ ವಿಜಯೇಂದ್ರ ಮಾಹಿತಿ.

12:45 PM Dec 15, 2023 IST | prashanth
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ  ನಾಳೆ ರಾಜ್ಯಕ್ಕೆ ಕೇಂದ್ರದ ಐವರು ಸಂಸದರ ನಿಯೋಗ ಬಿವೈ ವಿಜಯೇಂದ್ರ ಮಾಹಿತಿ

ಬೆಳಗಾವಿ ,ಡಿಸೆಂಬರ್,15,2023(www.justkannada.in):ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೇ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಕೇಂದ್ರದ ಐವರು ಮಹಿಳಾ ಸಂಸದರ ನಿಯೋಗ ರಾಜ್ಯಕ್ಕೆ ಭೇಟಿ ನೀಡಲಿದ್ದು ಸಂತ್ರಸ್ತೆ ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ  ಮಾಹಿತಿ ನೀಡಿದರು.

ಇಂದು ಸುವರ್ಣಸೌಧದಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ, ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಘಟನೆ ರಾಜ್ಯದ ಜನ ತಲೆತಗ್ಗಿಸುವಂಥದ್ದು.ರಾಜ್ಯ ಸರ್ಕಾರ ಪ್ರಕರಣವನ್ನು ಲಘುವಾಗಿ ಪರಿಗಣಿಸಿದೆ. ನಿನ್ನೆ ಹೈಕೋರ್ಟ್ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಿದೆ. ಅಂತಹ ಘಟನೆ ನಡೆಯಲು ಸರ್ಕಾರ ಯಾಕೆ ಅವಕಾಶ ಕೊಟ್ಟಿತು ಪೊಲೀಸ್ ಗಸ್ತು ಯಾಕೆ ಇರಲಿಲ್ಲ ಎಂದು ಹೈಕೋರ್ಟ್ ಪ್ರಶ್ನಿಸಿದೆ ಸರ್ಕಾರ ಏನು ಕ್ರಮ ತೆಗೆದುಕೊಂಡಿದೆ ಎಂದು ಪ್ರಶ್ನೆ ಮಾಡಿದೆ ಎಂದು ಹೇಳಿದರು.

ಪ್ರಕರಣವನ್ನು ಬಿಜೆಪಿ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ.  ನಾಳೆ ರಾಜ್ಯಕ್ಕೆ ಬಿಜೆಪಿ ಮಹಿಳಾ ಸಂಸದರ ನಿಯೋಗ ಭೇಟಿ ನೀಡಲಿದೆ. ಅಪರಾಜಿತ್ ಸಾರಂಗಿ ಸುನಿತಾ ದುಗ್ಗಲ್ ರಂಜಿತಾ ಕೂಲಿ ರಾಕೆಟ್ ಚಟರ್ಜಿ ಹಾಗೂ ಆಶಾಲಾಕಡ  ನಾಳೆ ಬೆಳಗಾವಿಗೆ ಆಗಮಿಸಲಿದ್ದು ಸಂತ್ರಸ್ತ ಮಹಿಳೆಯನ್ನ ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ  ಎಂದು ತಿಳಿಸಿದರು.

ಘಟನೆ ಖಂಡಿಸಿ ನಾವು ಪ್ರತಿಭಟನೆ ಮಾಡುತ್ತೇವೆ. ಹೈಕಮಾಂಡ್ ಸೂಚನೆ ಮೇರೆಗೆ ನಾವು ಪ್ರತಿಭಟನೆ ಮಾಡುತ್ತಿಲ್ಲ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಕಾರ್ಕಳ ಶಾಸಕ ಸುನಿಲ್ ಕುಮಾರ್ ಕೂಡ ಈ ಘಟನೆ ಕುರಿತಂತೆ ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ನಂತರ ರಾಜ್ಯದ  ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪೊಲೀಸರ ಬಗ್ಗೆ ಯಾರಿಗೂ ಭಯ ಇಲ್ಲದಂತಾಗಿದೆ. ಜವಾಬ್ದಾರಿಯುತ ಸಚಿವರ ತವರು ಕ್ಷೇತ್ರದಲ್ಲಿ ಘಟನೆ ನಡೆದಿದೆ ಇದನ್ನು ನಾವು ರಾಜಕೀಯವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಬಿ ವೈ ವಿಜಯೇಂದ್ರ ತಿಳಿಸಿದರು.

Key words: Woman - assault case-Delegation -five - MPs -state - BY Vijayendra

Tags :

.