For the best experience, open
https://m.justkannada.in
on your mobile browser.

ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಳಿ ಕುಟುಂಬಸ್ಥರಿಂದ ಆಗ್ರಹ.

05:41 PM Dec 11, 2023 IST | prashanth
ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಹಲ್ಲೆ ಪ್ರಕರಣ  ಕಠಿಣ ಕಾನೂನು ಕ್ರಮಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಳಿ ಕುಟುಂಬಸ್ಥರಿಂದ ಆಗ್ರಹ

ಬೆಳಗಾವಿ, ಡಿಸೆಂಬರ್​​​ ,11,2023(www.justkannada.in): ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿದರು.

ಬೆಳಗಾವಿ. ಬಿಮ್ಸ್​ ಆಸ್ಪತ್ರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ, ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿದರು. ಘಟನೆ ಬಗ್ಗೆ ಮಹಿಳೆ ಪತಿ ಲಗಮಣ್ಣ ಗಡ್ಕರಿಯಿಂದ ಮಾಹಿತಿ ಪಡೆದು ಧೈರ್ಯ ತುಂಬಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ಇಡೀ ಮಾನವ ಕುಲ ತಲೆ ತಗ್ಗಿಸುವ ಕೆಲಸ ಇದು.  ಘಟನೆ ಸಂಬಂಧ ಏಳು ಆರೋಪಿಗಳನ್ನು ಬಂಧಿಸಲಾಗಿದೆ. ಕೃತ್ಯವೆಸಗಿದವರ ವಿರುದ್ಧ ಕಾನೂನಿನಡಿ ಕಠಿಣ ಶಿಕ್ಷೆ ಆಗಬೇಕು. ನನ್ನ ತಾಲೂಕಿನಲ್ಲೇ ಇಂತಹ ಘಟನೆ ಆಗಿದ್ದು ಖೇದಕರ ಎಂದು ವಿಷಾದ ವ್ಯಕ್ತಪಡಿಸಿದರು.

ತಿಳಿವಳಿಕೆ ಇದ್ದವರು ಏಕೆ ಇಂತಹ ತಪ್ಪು ಮಾಡುತ್ತಾರೆ ಗೊತ್ತಾಗುತ್ತಿಲ್ಲ. ಮಹಿಳೆ ಮನಸ್ಸಿಗೆ ಘಾಸಿಯಾಗಿದೆ, ನಾನು ಅವರ ಬೆಂಬಲಕ್ಕಿದ್ದೇನೆ. ಅನ್ಯಾಯಕ್ಕೊಳಗಾದ ಮಹಿಳೆಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇನೆ ಎಂದರು.

Key words: woman -assault –case- demand -strict legal –action-Minister -Lakshmi Hebbalkar.

Tags :

.