For the best experience, open
https://m.justkannada.in
on your mobile browser.

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ.

06:00 PM Dec 19, 2023 IST | prashanth
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ  ಸಂತ್ರಸ್ತೆ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ, ಡಿಸೆಂಬರ್,19,2023(www.justkannada.in):  ಬೆಳಗಾವಿ ತಾಲ್ಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಇಂದು ಸಂತ್ರಸ್ತೆ ಕುಟುಂಬಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರು 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ್ದಾರೆ.

ಸಿಎಂ ನಿಧಿಯಿಂದ 5 ಲಕ್ಷ ರೂ. ಪರಿಹಾರದ ಚೆಕ್  ​ವಿತರಿಸಲಾಗಿದೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  5 ಲಕ್ಷ ರೂ. ಪರಿಹಾರದ ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 2 ಎಕರೆ ಜಮೀನು ಮಂಜೂರಾಗಿದೆ ಎಂದು ತಿಳಿಸಿದರು.

ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿದೆ. ತನಿಖೆ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಸಿಐಡಿಗೆ ಕೊಟ್ಟಿದ್ದಾರೆ. ಇಂತಹದೊಂದು ಘಟನೆ ಆಗಬಾರದಿತ್ತು ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

Key words: Woman-Assault- Case- Minister- Satish Jarakiholi -distributes -compensation check

Tags :

.