ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ.
06:00 PM Dec 19, 2023 IST
|
prashanth
ಬೆಳಗಾವಿ, ಡಿಸೆಂಬರ್,19,2023(www.justkannada.in): ಬೆಳಗಾವಿ ತಾಲ್ಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂತ್ರಸ್ತೆ ಕುಟುಂಬಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರು 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ್ದಾರೆ.
ಸಿಎಂ ನಿಧಿಯಿಂದ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಲಾಗಿದೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, 5 ಲಕ್ಷ ರೂ. ಪರಿಹಾರದ ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 2 ಎಕರೆ ಜಮೀನು ಮಂಜೂರಾಗಿದೆ ಎಂದು ತಿಳಿಸಿದರು.
ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿದೆ. ತನಿಖೆ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಸಿಐಡಿಗೆ ಕೊಟ್ಟಿದ್ದಾರೆ. ಇಂತಹದೊಂದು ಘಟನೆ ಆಗಬಾರದಿತ್ತು ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
Key words: Woman-Assault- Case- Minister- Satish Jarakiholi -distributes -compensation check
Next Article