ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ದ ಯುವತಿಗೆ ವಂಚನೆ ಆರೋಪ: ದೂರು ದಾಖಲು
ಬೆಂಗಳೂರು, ನವೆಂಬರ್,17,2023(www.justkannada.in): ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಯುವತಿಗೆ ವಂಚನೆ ಮಾಡಿದ ಆರೋಪ ಕೇಳಿ ಬಂದಿದ್ದು ದೂರು ದಾಖಲಾಗಿದೆ.
ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿರುವ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ವಂಚನೆ ದೂರು ದಾಖಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಿಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಮೂಲದ ಯುವತಿ ದೂರು ದಾಖಲಿಸಿದ್ದು, ಈ ದೂರಿ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪಾರ್ಟಿವೊಂದರಲ್ಲಿ ಯುವತಿಯನ್ನು ರಂಗನಾಥ್ ಪರಿಚಯ ಮಾಡಿಕೊಂಡಿದ್ದರು. ಈ ನಡುವೆ ಹೋಟೆಲ್ ನಲ್ಲಿ ಲೈಂಗಿಕ ಸಂಪರ್ಕ ಬೆಳೆಸಿ ಈಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ. ಈ ದೂರಿನ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಿಂದ ಇಬ್ಬರಿಗೂ ನೋಟಿಸ್ ಜಾರಿಯಾಗಿದೆ. ವಿಚಾರಣೆಗೆ ಬರುವಂತೆ ರಂಗನಾಥ್ ಅವರಿಗೆ ನೋಟಿಸ್ ನೀಡಲಾಗಿದೆ. ಇನ್ನು ಯುವತಿಗೆ ಸೂಕ್ತ ದಾಖಲೆ ಸಮೇತ ಠಾಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.
ವಂಚನೆ ಆರೋಪ ಮಾಡಿರುವ ಯುವತಿ ವಿರುದ್ದ ರಂಗನಾಥ್ ಸಹ ಪ್ರತಿದೂರು ದಾಖಲಿಸಿದ್ದಾರೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಯುವತಿ ವಿರುದ್ಧ ದೂರು ದಾಖಲಿಸಿದ್ದು, ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ಹಣ ನೀಡುವಂತೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಅಲ್ಲದೇ 15 ಲಕ್ಷ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಯುವತಿ ವಿರುದ್ಧ ದೂರಿನಲ್ಲಿ ಆರೋಪಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: Young woman- accused -fraud –against- MP -Devendrappa's- son-Complaint