For the best experience, open
https://m.justkannada.in
on your mobile browser.

ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆ: ಮುಂಜಾಗ್ರತಾ ಕ್ರಮಕ್ಕೆ ಸೂಚನೆ.

11:23 AM Nov 02, 2023 IST | prashanth
ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆ  ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಚಿಕ್ಕಬಳ್ಳಾಪುರ, ನವೆಂಬರ್,2,2023(www.justkannada.in): ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಕ್ಕೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳಲ್ಲಿ ಅಪಾಯಕಾರಿ ಜಿಕಾ ವೈರಸ್ ಪತ್ತೆಯಾಗಿದೆ.  ಸೊಳ್ಳೆಗಳ ರಕ್ತದಲ್ಲಿ ಜಿಕಾ ವೈರಸ್ ಪತ್ತೆಯಾಗಿದ್ದು ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

ತಲಕಾಯಲಬೆಟ್ಟ, ದಿಬ್ಬೂರಹಳ್ಳಿ, ಶಿಡ್ಲಘಟ್ಟ ಸೇರಿದಂತೆ ವಿವಿದೆಡೆ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಈ ಕುರಿತು ಮಾತನಾಡಿರುವ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಈಗಾಗಲೇ ಸೋಂಕು ಪತ್ತೆಯಾದ ಭಾಗದಲ್ಲಿ ವೈದ್ಯರ ತಂಡ ಮುನ್ನೆಚ್ಚರಿಕೆ ವಹಿಸಿದೆ. ಜಿಕಾ ವೈರಸ್​ ಪತ್ತೆಯಾದ ಕಡೆ ಯಾವುದೇ ಹರಡುವಿಕೆಯಾಗಿಲ್ಲ. ಜಿಕಾ ವೈರಸ್ ಪತ್ತೆಯಾದ ಸುತ್ತಮುತ್ತಲಿನ ಗ್ರಾಮಗಳಲ್ಲಿ ತೀವ್ರ ನಿಗಾ ಇಡಲಾಗಿದೆ. ಮನೆ ಮನೆ ಸಮೀಕ್ಷೆ ಮಾಡಿ ರಕ್ತ ಸಂಗ್ರಹಕ್ಕೆ ಮುಂದಾಗಿದ್ದೇವೆ. ಜಿಕಾ ವೈರಸ್ ಹರದಡಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು.

ಈ ಕುರಿತು ಮಾತನಾಡಿರುವ  ಚಿಕ್ಕಬಳ್ಳಾಪುರ ಡಿಹೆಚ್​ಒ ಡಾ.ಮಹೇಶ್​ ಕುಮಾರ್, ಅಕ್ಟೋಬರ್ 27ರಂದು ಸೊಳ್ಳೆಗಳಲ್ಲಿ ಜಿಕಾ ವೈರಸ್ ಪತ್ತೆಯಾಗಿದೆ. ಆದರೆ ಮನುಷ್ಯನ ರಕ್ತದಲ್ಲಿ ಜಿಕಾ ವೈರಸ್​ ಕಂಡು ಬಂದಿಲ್ಲ. ಮನುಷ್ಯರಲ್ಲಿ ಜಿಕಾ ವೈರಸ್ ಪತ್ತೆಯಾದರೆ ವೇಗವಾಗಿ ಹರಡುತ್ತದೆ. ಪರೀಕ್ಷೆಗೆ ಮನುಷ್ಯರ ರಕ್ತದ ಮಾದರಿಯನ್ನು ಲ್ಯಾಬ್​ಗೆ ಕಳಿಸಲಾಗಿದೆ.  ಜಿಕಾ ವೈರಸ್ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ. ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Key words: Zika virus- detected – Chikkaballapur-Notice - Precautionary Action.

Tags :

.